ಕಾಳಗಿ: ಗಡಿಕೇಶ್ವರ ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ ಭಂವರ್ ಸಿಂಗ್
ಕಾಳಗಿ ತಾಲೂಕಿನ ಗಡಿಕೇಶ್ವರ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ದಿಢೀರ್ ಭೇಟಿ ನೀಡಿ ಶಾಲೆಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಅಕ್ಷರ ದಾಸೋಹದ ಆಹಾರ ಧಾನ್ಯಗಳ ಗುಣಮಟ್ಟ ವೀಕ್ಷಿಸಿ, ಅಡುಗೆ ಸ್ಥಳದ ಸ್ವಚ್ಛತೆ ಬಗ್ಗೆ ಸೂಚನೆ ನೀಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನ ಉಪಹಾರ ಸೇವಿಸಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ತರಲು ಕ್ರಮ ಕೈಗೊಳ್ಳುವಂತೆ ಹಾಗೂ ಶಿಕ್ಷಕರು ಪಠ್ಯಕ್ರಮ ಪೂರ್ಣಗೊಳಿಸಲು ಸೂಚನೆ ನೀಡಿದರು. ಈ ಸಂದರ್ಭ ಡಾ. ಬಸಲಿಂಗಪ್ಪ ಡಿಗ್ಗಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥೀತರಿದ್ದರು ಎಂದು ಶುಕ್ರವಾರ 8 ಅಧಿಕಾರಿಗಳು ಮಾಹಿತಿ ನೀಡಿದ್ದಾರೆ