ಯಲ್ಲಾಪುರ: ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಡಸೆ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದರು. ನಂತರ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ " ಬೇಟಿ ಬಜಾವೋ ಬೇಟಿ ಪಡಾವೋ " ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.