ಬೆಂಗಳೂರು ಉತ್ತರ: ಬೆಂಗಳೂರಿನ ಕಸ ವಿಲೇವಾರಿಗೆ 33 ಪ್ಯಾಕೇಜ್‌ಗಳ ಟೆಂಡರ್
ಬೆಂಗಳೂರಿನ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್‌ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ.ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಆಗಸ್ಟ್ 21ರಂದು ಮಧ್ಯಾಹ್ನ 3 ಗಂಟೆಗೆ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೇಶವ ಪ್ರಸಾದ್ ಅವರು ಬೆಂಗಳೂರಿನ ಕಸ ವಿಲೇವಾರಿ ಹಾಗೂ ಕಸದ ಸೆಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ" ಎಂದು ಮಾಹಿತಿ ನೀಡಿದರು.