ರಾಯಚೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿಯ ತರಗತಿಗಳು ನವೆಂಬರ್ 22 ರಿಂದ ಯಶಸ್ವಿಯಾಗಿ ಆರಂಭವಾದವು. ತರಬೇತಿಯ ಮೊದಲ ದಿನವಾದ ನವೆಂಬರ್ 22ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರು, ತರಬೇತಿಗೆ ಆಯ್ಕೆಯಾದ 120 ವಿದ್ಯಾರ್ಥಿಗಳೊಂದಿಗೆ ನೇರ ಸಂವಹನ ನಡೆಸಿದರು.