ಮೈಸೂರು: ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Mysuru, Mysuru | Sep 30, 2025 ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿಗೆ ಮಂಗಳವಾರ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಾಮುಂಡಿ ಬೆಟ್ಟವನ್ನು ಮೆಟ್ಟಿಲುಗಳ ಮೂಲಕ ಹತ್ತಿ, ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಆಗಮಿಕರಾದ ಶಶಿಶೇಖರ ದೀಕ್ಷಿತ್ ಅವರು ಶೋಭಾ ಕರಂದ್ಲಾಜೆ ಅವರನ್ನು ಬರಮಾಡಿಕೊಂಡು ಗೌರವಿಸಿದರು.