ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೋಲಿಯೋ ಮುಕ್ತ ಭಾರತ – ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಹಂಪಯ್ಯನಾಯಕ ಅವರು ಮಗುವಿಗೆ ಪೋಲಿಯೋ ಹನಿಗಳನ್ನು ಹಾಕುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ತಾಲೂಕಿನಾದ್ಯಂತ 0–5 ವರ್ಷದ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಲು ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿವರ್ಷ ಉಚಿತವಾಗಿ ಪೋಲಿಯೋ ಹನಿಗಳನ್ನು ನೀಡುವ ಮೂಲಕ ದೇಶವನ್ನು ಪೋಲಿಯೋ ಮುಕ್ತವಾಗಿಸಿದೆ. ಆದರೂ ಮಕ್ಕಳಿಗೆ ಅಂಗವೈಕಲ್ಯ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತಿದೆ.