ಹುಬ್ಬಳ್ಳಿ ನಗರ: ಕೇಂದ್ರ ಸರ್ಕಾರದ ಉದ್ಯೋಗ ಮೇಳದಲ್ಲಿ ಆಯ್ಕೆಯಾದವರಿಗೆ : ನಗರದಲ್ಲಿ ನೇಮಕಾತಿ ಪತ್ರ ವಿತರಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಭಾರತೀಯ ಅಂಚೆ ಇಲಾಖೆ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ಪೋಸ್ಟಲ್ ಇಲಾಖೆಯಲ್ಲಿ 17 ನೆ  ರಾಷ್ಟ್ರೀಯ ಸಮಾರಂಭ ಹಿನ್ನೆಲೆಯಲ್ಲಿ ಉದ್ಯೋಗ ಮೇಳಕ್ಕೆ  ವಿದ್ಯುಕ್ತವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಚಾಲನೆ ನೀಡಿ ಆಯ್ಕೆಯಾದವರಿಗೆ ನೇಮಕಾತಿ ಪತ್ರವನ್ನು ವಿತರಿಸಿದರು.  ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜು ಆವರಣದ ಕೆಎಲ್ಇ ಆಡಿಟೋರಿಯಂ ನಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದು. ಉದ್ಯೋಗ ಮೇಳದಲ್ಲಿ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.