ಶಿವಮೊಗ್ಗ: ಹೊಳಲೂರಿನಲ್ಲಿ ನಡೆದಿದ್ದ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
ಹೊಳಲೂರು ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯ ಜೀವಾವಧಿ ಶಿಕ್ಷೆ ಏನಾಗಲಿಸುವ ಮೂಲಕ ಆದೇಶ ಹೊರಡಿಸಿದೆ 2020ರಲ್ಲಿ ಹೊಳಲೂರು ಗ್ರಾಮದ ಮಲ್ಲೇಶಪ್ಪ ಎಂಬುವರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರಿಯಾಜ್, ಮುನಿರಾಜು ಮತ್ತು ಅರುಣ ಎಂಬುವವರು ಬರ್ಬರವಾಗಿ ಕೊಲೆ ಮಾಡಿದ್ದರು ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರುಳ ಸಿದ್ದಾರಾಧ್ಯ ಹೆಚ್.ಜೆ ಅವರು ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ತಲ 20,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.