ಬೆಂಗಳೂರು ಉತ್ತರ: ಸಾಮಾಜಿಕ ಶೈಕ್ಷಣಿಕ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಪಾಲ್ಗೊಂಡು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಸಿಎಂ, 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ.