ಸಂಡೂರು: ಪಟ್ಟಣದ ಪೊಲೀಸ್ ಠಾಣಾ
ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ದಾಳಿ: 24 ಜನರ ಮೇಲೆ ಪ್ರಕರಣ ದಾಖಲು
Sandur, Ballari | Oct 22, 2025 ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಹಣ ಸಮೇತ ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳವಾರ ಸಂಜೆ 6ಗಂಟೆಗೆ ನಡೆದಿದೆ. 24 ಜನರನ್ನು ಬಂಧಿಸಿ ಅವರಿಂದ ₹18,900 ಹಣವನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣೆಯ ಪೊಲೀಸರು ಬುಧುವಾರ ಬೆಳಿಗ್ಗೆ 9ಗಂಟೆಗೆ ತಿಳಿಸಿದ್ದಾರೆ.