ಜೋಯಿಡಾ : ತಾಲೂಕಿನ ಕುಂಬಾರವಾಡದ ಶ್ರೀ ಕ್ಷೇತ್ರಪಾಲ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ 12ನೇ ವರ್ಷದ ಮಹಾಪೂಜೆ, ಅಗ್ನಿಕುಂಡ ಸೇವೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಪ್ರಮುಖರಾದ ಚಂದ್ರಕಾಂತ ದೇಸಾಯಿ ಅವರು ತಿಳಿಸಿದ್ದಾರೆ. ಅವರು ಶುಕ್ರವಾರ ಸಂಜೆ 5:30 ಗಂಟೆ ಸುಮಾರಿಗೆ ಕುಂಬಾರವಾಡದಲ್ಲಿ ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದರು. ಸಂಜು ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕುಮಟಾದ ರಮೇಶ ಮಾದನಗೇರಿ ಗುರುಸ್ವಾಮಿಯವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸುವಂತೆ ವಿನಂತಿಸಿದ್ದಾರೆ.