ಕುಂದಗೋಳದ ಕುಮಡೊಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರಸ್ವಾಮಿ, ಶ್ರೀ ಈಶ್ವರ, ಶ್ರೀ ನಂದೀಶ್ವರ ಶಿವಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಜನಜಾಗೃತಿ ಧರ್ಮ ಸಮಾರಂಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಭಾಗವಹಿಸಿ ಪೂಜೆ ಯಲ್ಲಿ ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.. ಈ ಸಂದರ್ಭದಲ್ಲಿ ಇಂದು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದವನ್ನು ಪಡೆಯಲಾಯಿತು. ಕಾರ್ಯಕ್ರಮದಲ್ಲಿ ನನ್ನೊಂದಿಗೆ ಪಕ್ಷದ ಮುಖಂಡರು ಮತ್ತು ಸ್ಥಳೀಯ ಗುರು ಹಿರಿಯರು ಜೊತೆಗಿದ್ದರು.