ಮಂಗಳೂರು: ಸೌಜನ್ಯ ಪ್ರಕರಣದ ಮರು ತನಿಖೆ ಬಗ್ಗೆ ಲಿಖಿತ ಅಭಿಪ್ರಾಯಕ್ಕೆ ಪ್ರಧಾನಿ ಮೋದಿಗೆ ಹೋರಾಟ ಸಮಿತಿ ಒತ್ತಾಯ ; ನಗರದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಮಹೇಶ್
ಸೌಜನ್ಯ ಪ್ರಕರಣ ಸಿಬಿಐ ನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ಅಭಿಪ್ರಾಯವನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು. ಈ ಬಗ್ಗೆ ಎ.14 ರಂದು ಮಂಗಳೂರಿಗೆ ಭೇಟಿ ನೀಡಿ ಸಭೆ ಮಾಡಲಿರುವ ಪ್ರಧಾನಿ ಮೋದಿ ಘೋಷಣೆ ಮಾಡಬೇಕು ಎಂದು ಸೌಜನ್ಯ ಪರ ಹೋರಾಟ ಸಮಿತಿ ಪ್ರಮುಖರಾದ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದ್ದಾರೆ. ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು, ಇಲ್ಲವಾದರೆ ನೋಟಾ ಅಭಿಯಾನ ತೀವ್ರಗೊಳಿಸಲಾಗುವುದು ಎಂದರು.