ಬೆಂಗಳೂರು ಉತ್ತರ: ನಗರದಲ್ಲಿ ಡಿಸಿಎಂ ಡಿಕೆಶಿ ಭೇಟಿಯಾದ ಉದ್ಯಮಿ ಕಿರಣ್ ಮುಜುಂದಾರ್ ಶಾ; ರಸ್ತೆ ಗುಂಡಿ ಸೇರಿ ಅಭಿವೃದ್ಧಿ ಬಗ್ಗೆ ಚರ್ಚೆ
ಬೆಂಗಳೂರಿನ ರಸ್ತೆ ಗುಂಡಿಗಳು ಸೇರಿದಂತೆ ಮೂಲಸೌಕರ್ಯಗಳ ಕುರಿತಾಗಿ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಯೋಕಾನ್ ಕಂಪನಿಯ ಮುಖ್ಯಸ್ಥೆ ಹಾಗೂ ಹೆಸರಾಂತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸದಾಶಿವನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ದೀಪಾವಳಿ ಶುಭಾಶಯ ತಿಳಿಸಿ, ಕೆಲಕಾಲ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳು, ಕಸ ಸೇರಿ ಮೂಲಸೌಕರ್ಯ ಸಮಸ್ಯೆಗಳ ಸಂಬಂಧ ಸರ್ಕಾರದ ವಿರುದ್ಧ ಶಾ ಸರಣಿ ಪೋಸ್ಟ್ ಮಾಡಿ ಟೀಕಿಸಿದ್ದರು. ಇತ್ತ ಡಿಸಿಎಂ ಕೂಡ ಶಾ ವಿರುದ್ಧ ಪರೋಕ್ಷವಾಗಿ ಪೋಸ್ಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದರು.