ಜಮಖಂಡಿ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ, ಸಚಿವ ಸತೀಶ ಜಾರಕಿಹೊಳಿ ಭಾಗಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ಸಾದನೆಗೈದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ ಶ್ರೀ ಶಂಕರ ಗುರೂಜಿ ಉದ್ಘಾಟಕರಾದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ,ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಮಾಜಿ ಶಾಸಕ ಆನಂದ ನ್ಯಾಮಗೌಡ, ಶ್ರೀಕಾಂತ್ ಕುಲಕರ್ಣಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ತಾಲೂಕಾದ್ಯಕ್ಷ ಗಂಗಾಧರ ಮರದಾನಿ,ಡಿ.ಜಿ.ನಾಯಕ ಸೇರಿದಂತೆ ವೇದಿಕೆ ಮೇಲಿನ ಗಣ್ಯರು ಜ್ಯೋತಿ ಬೇಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.