ಚಳ್ಳಕೆರೆ: ನಾಯಕನಹಟ್ಟಿ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚದಿಂದ ಸ್ವಯಂ ರಕ್ತದಾನ ಶಿಬಿರ
ಚಳ್ಳಕೆರೆ:-ಯುವಕರು ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಈ ರಾಮರೆಡ್ಡಿ ಹೇಳಿದರು. ಸೋಮವಾರ ಬೆಳಿಗ್ಗೆ 11:30ಕ್ಕೆ ನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷದ ಮೊಳಕಾಲ್ಮೂರು ವಿಧಾನ ಸಭಾ ನಾಯಕನಹಟ್ಟಿ ಮಂಡಲ ಹಾಗೂ ಸೇವೆ ಮತ್ತು ಸಮರ್ಪಣಾ ಅಭಿಯಾನದಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತ ದಾನ - ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.