ಮೈಸೂರು: ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತನ್ನು ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ನಗರದಲ್ಲಿ ಶಾಸಕ ಮಧು ಜಿ ಬಂಗಾರಪ್ಪ
Mysuru, Mysuru | Sep 15, 2025 ಮಾನವೀಯ ಮೌಲ್ಯಗಳಿಗೆ ಹೆಚ್ಚು ಒತ್ತನ್ನು ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು , ಮಾನವೀಯತೆಯನ್ನು ಮೆರೆಯುವಲ್ಲಿ ಮೊದಲು ಯಾರಾದರೂ ಗುರುಗಳು ಇದ್ದಾರೆ ಎಂದರೆ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾತ್ರ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತೋತ್ಸವ ಸಮಿತಿಯ ಸಹಯೋಗದೊಂದಿಗೆ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ 171 ವರ್ಷದ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.