ಬೆಳಗಾವಿ: ನ್ಯೂ ವೈಭವ ನಗರದಲ್ಲಿ ರಸ್ತೆ, ಚರಂಡಿ,ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ನ್ಯೂ ವೈಭವ ನಗರದಲ್ಲಿ ಇಂದು ಶುಕ್ರವಾರ 6 ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಂದ ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸ್ಥಳೀಯರ ಸಲಹೆ ಸೂಚನೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ ಕುಮಾರ್,ಕೆಇಬಿ ಇಲಾಖೆಯ ಅಧಿಕಾರಿ ಲಮಾನಿ ಮುಂತಾದವರು ಉಪಸ್ಥಿತರಿದ್ದರು.