ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ವ್ಯಕ್ತಿಯ ಮೃತ ದೇಹ ಪತ್ತೆ
ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ರೈಲಿಗೆ ಸಿಲುಕಿ ವೃದ್ಧನೋರ್ವ ಸಾವನ್ನಪ್ಪಿದ್ದಾನೆ. ಸೌದೆ ಆರಿಸಲು ಬಂದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ನಗರದ ಗುರುಪುರದ ನಿವಾಸಿ ರುದ್ರಪ್ಪ (68) ಎಂದು ಗುರುತಿಸಲಾಗಿದೆ. ಗಾರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ 11-30ರ ಮೈಸೂರು to ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಆಯಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ ಕಣ್ಣು ಮಂಜಾಗಿದ್ದ ಕಾರಣ ರೈಲಿನ ಶಬ್ದ ಕೇಳದೆ ಆತನ ಮೇಲೆ ಹರಿದಿದೆ ಎಂದು ಸ್ಥಳೀಯರು ದೂರಿದ್ದಾರೆ.