ಹುಕ್ಕೇರಿ: ಗವನಾಳ ಗ್ರಾಮದಲ್ಲಿ 35 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಬೆಳಗಾವಿ ಜಿಲ್ಲೆಯ ಗವನಾಳ ಗ್ರಾಮದಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದ್ದು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.