Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಒಂದು ವರ್ಷದಿಂದ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಮೂವರು ಶ್ರೀಲಂಕಾ ಪ್ರಜೆಗಳು ಸಿಸಿಬಿ ವಶಕ್ಕೆ

ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಮೂವರು ಶ್ರೀಲಂಕಾದ ಪ್ರಜೆಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲೆಸಿದ್ದ ಮೂವರನ್ನ ವಶಕ್ಕೆ ಪಡೆಯಲಾಗಿದ್ದು, ವಿದೇಶಿಗರ ಕಾಯ್ದೆಯಡಿ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಸೆಪ್ಟೆಂಬರ್ 29ರಂದು ಬೆಳಿಗ್ಗೆ 11:30ಕ್ಕೆ ಮಾಹಿತಿ ನೀಡಿದ ಪೊಲೀಸರು, 'ಪಾಸ್‌ಪೋರ್ಟ್ ಮತ್ತು ವೀಸಾ ಇಲ್ಲದೆ 2024ರಲ್ಲಿ ಜಾಫ್ನಾದಿಂದ ಬೋಟ್ ಮೂಲಕ ತಮಿಳುನಾಡಿನ ರಾಮೇಶ್ವರಂಗೆ ಬಂದಿದ್ದ ಆರೋಪಿಗಳು,ಅಲ್ಲಿದ್ದ ವಿದೇಶಿ ಮೂಲದ ಮತ್ತೋರ್ವ ವ್ಯಕ್ತಿಯ ನೆರವು ಪಡೆದು ಬೆಂಗಳೂರು ತಲುಪಿದ್ದರು.ನಂತರ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದರು' ಎಂದರು.
ಬೆಂಗಳೂರು ಉತ್ತರ: ಒಂದು ವರ್ಷದಿಂದ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಮೂವರು ಶ್ರೀಲಂಕಾ ಪ್ರಜೆಗಳು ಸಿಸಿಬಿ ವಶಕ್ಕೆ - Bengaluru North News