ಕಬ್ಬಿಣದ ಹಾರಿಯಿಂದ ಹೊಡೆದು ಗಂಡ ಪತ್ನಿಯನ್ನು ಹತ್ಯೆಗೈದ ಘಟನೆ ಕಲಘಟಗಿ ತಾಲ್ಲೂಕಿನ ಜಿನ್ನೂರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಜಿನ್ನೂರ ಗ್ರಾಮದ ಶಾಂತವ್ವ ಶಿವಪ್ಪ ಹಿಂಡಸಗೇರಿ (38) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆಗೆ ಪ್ರಕರಣ ದಾಖಲಾಗಿದೆ.