ರಾಮದುರ್ಗ: ಕಾನೂನು ಸುವ್ಯವಸ್ಥೆ ಕಾಪಾಡಲೂ ಪೊಲೀಸ್ ಇಲಾಖೆ ಹದ್ದಿನ ಕಣ್ಣು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ್
ಕಾನೂನು ಸುವ್ಯವಸ್ಥೆ ಕಾಪಾಡಲೂ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ್ ಹೇಳಿದರು. ಬೆಳಗಾವಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು, ಜನದಟ್ಟಣೆ ಮತ್ತು ಸಂಚಾರದಟ್ಟಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಅತ್ಯಾಧುನಿಕ ತಂತ್ರಜ್ಞಾನದ ಡಿಜೆಐ ಮೋವಿಕ್ ಪ್ರೋ - ದ್ರೋಣ್ ಕ್ಯಾಮೆರಾ ಖರೀದಿಸಲಾಗಿದೆ. ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದರು ಇದರ ತರಬೇತಿಯನ್ನು ಬೆಳಗಾವಿಯ ಎಲ್ಲ ಪೊಲೀಸ್ ಠಾಣೆಗಳ ಸಿಬ್ಬಂದಿಗಳಿಗೆ ನೀಡಲಾಗುತ್ತಿದೆ. ಇಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿಬ್ಬಂದಿಗಳಿಗೆ ತರಬೇತಿ ನೀಡಲಾಯಿತು. ಎಂದರು