ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿ ಬ್ಯಾಂಕ್ ಆಫ್ ಬರೋಡಾ' ಶಾಖೆಯಲ್ಲಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಬ್ಯಾಂಕಿನ ಹಿಂಬದಿಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿರುವ ದುಷ್ಕರ್ಮಿಗಳು, ಹಣವಿದ್ದ ಸ್ಟ್ರಾಂಗ್ ರೂಮ್ ಒಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ಸೋಮವಾರ ಸಿಬ್ಬಂದಿ ಬ್ಯಾಂಕಿಗೆ ಬಂದಾಗ ಗೋಡೆ ಒಡೆದಿರುವುದು ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.