ಚಿಕ್ಕಮಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ
ನಿವೃತ್ತಿವರೆಗೆ ಸೇವಾಭದ್ರತೆ, ಇಲಾಖೆಯಿಂದಲೇ ನೇರವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯಸರಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಪರಿಶಿಷ್ಟ ವರ್ಗಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಘದಲ್ಲಿ ಕಳೆದ 20 ವರ್ಷದಿಂದ ಕಡಿಮೆ ವೇತನದಲ್ಲಿ ಮಾಡುತ್ತಿದ್ದು, ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದರು.