ಬಳ್ಳಾರಿ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟ್ ಜೂಜಾಟಕ್ಕೆ ಅವಕಾಶವಿಲ್ಲ: ನಗರದಲ್ಲಿ ಎಸ್ಪಿ ಎಚ್ಚರಿಕೆ
ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟ್ ಜೂಜಾಟಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಎಸ್ಪಿ ಡಾ.ಶೋಭಾರಾಣಿ ತಿಳಿಸಿದ್ದಾರೆ ಭಾನುವಾರ ಸಂಜೆ 6ಗಂಟೆಗೆ ಈ ಮಾಹಿತಿ ನೀಡಿದ ಎಸ್ಪಿ, ದೀಪಾವಳಿ ಹಬ್ಬದಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತದೆ ಎಂದು ಗೊತ್ತಾಗಿದೆ. ಆದರೆ, ಇದಕ್ಕೆ ನಾವು ಆಸ್ಪದ ನೀಡುವುದಿಲ್ಲ. ಹಬ್ಬದಲ್ಲಿ ಇಸ್ಪೀಟು ಜೂಜಾಟ ಆಡಲು ಯಾವ ನಿಯಮವಿಲ್ಲ. ಎಲ್ಲ ಠಾಣೆಗಳಿಗೆ ಸೂಚನೆ ನೀಡಿ ಧ್ವನಿವರ್ಧಕಗಳ ಮೂಲಕ ಜನರಿಗೆ ಸೂಚನೆ ಎಚ್ಚರಿಕೆ ನೀಡಲಾಗುತ್ತಿದೆ. ಒಂದು ವೇಳೆ ಇಸ್ಪೀಟ್ ಜೂಜಾಟ ಕಂಡು ಬಂದರೆ ಕೇಸ್ ಹಾಕಲಾಗುವುದು ಎಂದು ಎಸ್ಪಿ ತಿಳಿಸಿದರು.