ದೊಡ್ಡಬಳ್ಳಾಪುರ : ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ಪ-ಮಗನ ನಡುವೆ ಜಗಳ ನಡೆದಿದ್ದು, ಜಗಳದ ಅವೇಶದಲ್ಲಿ ತಂದೆಯೇ ಮಗನ ತಲೆಗೆ ಗುಂಡು ಹಾರಿಸಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಹರೀಶ್ (30) ಮೇಲೆ ಗುಂಡಿನ ದಾಳಿಗೆ ತುತ್ತಾಗಿದ್ದು, ಕೆನ್ನೆ ಮತ್ತು ಕಣ್ಣಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.