ಶಿವಮೊಗ್ಗ: ಸೊರಬದಲ್ಲಿ ತಾಲ್ಲೂಕು ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ವಿಪತ್ತು ನಿರ್ವಹಣಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಹಿನ್ನೆಲೆಯಲ್ಲಿ ಸುರಕ್ಷಿತ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸ್ವಚ್ಛತೆ ಮತ್ತು ಆರೋಗ್ಯನಮೆಲೆದ ಕಾಪಾಡಿಕೊಳ್ಳುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದರು.