ಕುರುಗೊಡು: ನಗರದಲ್ಲಿ ಆರ್.ಎಸ್.ಎಸ್ ಪಥಸಂಚಲನ, ಪೊಲೀಸ್ ಬಿಗಿ ಭದ್ರತೆ
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಅಕ್ಟೋಬರ್ 11, ಶನಿವಾರ ಸಂಜೆ 5:30ಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್) ವತಿಯಿಂದ ಪಥಸಂಚಲನ ನಡೆಯಿತು.ನಗರದ ಶ್ರೀ ದೊಡ್ಡ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪಥಸಂಚಲನವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಸ್ವಯಂಸೇವಕರು ಶಿಸ್ತಿನೊಂದಿಗೆ ಭಾಗವಹಿಸಿದರು.ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು.