ಮುದ್ದೇಬಿಹಾಳ: ಪಟ್ಟಣದಲ್ಲಿ ಬನಶಂಕರಿ ಸಹಕಾರಿ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದಲಿಂಗ ಶ್ರೀ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಶ್ರೀ ಬನಶಂಕರಿ ಪತ್ತಿನ ಸಹಕಾರ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ವಿರಕ್ತ ಮಠದ ಸಿದ್ದಲಿಂಗ ಶ್ರೀಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ ಸಹಕಾರಿ ಸಂಘಗಳು ಕೇವಲ ಲಾಭದಾಯಕವಾಗದೆ ಸಮಾಜ ಬದಲಾವಣೆಯ ಜೊತೆಗೆ ರೈತ ಬಲವರ್ಧನೆಯ ಯೋಜನೆಗಳನ್ನು ರೂಪಿಸಿಕೊಂಡು ರೈತರ ಏಳಿಗೆಗೆ ಸಹಕಾರಿ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಪದಾಧಿಕಾರಿಗಳು ಮಠಾಧೀಶರು ಜನಪ್ರತಿನಿಧಿಗಳು ಭಾಗಿಯಾಗಿದ್ದರು.