ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಬರಬೇಕಿದೆ: ನ್ಯಾ. ಮುಜಫರ್ ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಎಲ್ಲಾ ರಂಗದಲ್ಲೂ ಮೇಲುಗೈ ಸಾಧಿಸಿದಾಗ ಮಾತ್ರ ಹೆಣ್ಣು ಮಕ್ಕಳು ಗೌರವವನ್ನು ಸಾಧಿಸಲು ಸಾಧ್ಯವಾಗುತ್ತದೆ ಹಾಗೂ ದೌರ್ಜನ್ಯಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೆಜಿಎಫ್ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುಜಾಫರ್ ಎ.ಮಂಜರಿ ಅವರು ತಿಳಿಸಿದರು. ಗ್ರಾಮದ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಆವರಣದಲ್ಲಿ ಕೆಜಿಎಫ್ ತಾಲೂಕು ಕಾನೂನು ಸೇವೆಗಳ ಸಮಿತಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ಕಾನೂನಿನ ಅರಿವು ಮತ್ತು ಪ್ರೋತ್ಸಾ ಕಾಯ್ದೆ ಅರಿವು ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರ