ಹೊಳಲ್ಕೆರೆ ಪಟ್ಟಣದಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ನಡೆದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಸಂಜೆ 7 ಗಂಟೆಗೆ ಹೊಳಲ್ಕೆರೆ ಪಟ್ಟಣದ ಚಿತ್ರದುರ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಚಿತ್ರದುರ್ಗ ದಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಖಾಸಗೀ ಬಸ್ ಮತ್ತು ಅಡಿಕೆ ಸಾಗಿಸುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಬವಿಸಿದೆ.