ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಹಾಗೂ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಜಂಟಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಪೋತ್ನಾಳದ ಸ್ನೇಹ ಜ್ಯೋತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ್ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.