ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ರಾಜ್ಯದ ಪಟ್ಟಣ ಪಂಚಾಯಿತಿಗಳ ಚುನಾವಣೆ ಫಲಿತಾಂಶವು ಅವರ ವೈಫಲ್ಯಕ್ಕೆ ದಿಕ್ಸೂಚಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವೀರ ಬಾಲಕರ ದಿನ ಕಾರ್ಯಕ್ರಮದ ಅಂಗವಾಗಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಬಗ್ಗೆ ಯಾರೂ ಸಂತಸದಿಂದಿಲ್ಲ. ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ತಮ್ಮ ಮುಖವಾಡ ಕಳಚಿತ್ತು.