ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಹೆಸರಿನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಗಳನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಆರು ಲಕ್ಷಕ್ಕೂ ಅಧಿಕ ಮೌಲ್ಯದ ಆಭರಣ, 60 ಸಾವಿರ ನಗದು ಹಾಗೂ ಏಳು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಶೀಘ್ರವಾಗಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.