ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ಬಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸೋಮವಾರ 5 ಗಂಟೆಗೆ ಸೇಡಂ ಪಟ್ಟಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನರೇಗಾ ಎಂಬ ಗಾಂಧೀಜಿಯ ಹೆಸರಿನ ಕಾಯ್ದೆಯನ್ನು ಬದಲಾಯಿಸಿ ವಿ.ಬಿ.ಜಿ. ರಾಮ್ ಜಿ ಎಂದು ಮರುನಾಮಕರಣ ಮಾಡಿರುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ಧಕ್ಕೆ ಎಂದು ಅವರು ಹೇಳಿದರು.