ಲೋಕಸಭಾ ಚುನಾವಣೆ ಮುಂಚಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದು ಬಿಜೆಪಿಯ ಗಿಮಿಕ್ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದು ಬಿಜೆಪಿ ಗಿಮಿಕ್, ಜಾತಿ ಜಾತಿಗಳಲ್ಲಿ ಧರ್ಮ ಧರ್ಮಗಳಲ್ಲಿ ಹೊಡೆದಾಡಬೇಕು ಎನ್ನುವ ರೀತಿಯಲ್ಲಿ ಭಾವನಾತ್ಮಕ ವಿಷಯಗಳನ್ನು ಕೆರಳಿಸುವಂತ ರೀತಿಯಲ್ಲಿ ಜನರಿಗೆ ದಾರಿ ತಪ್ಪಿಸುವುದಕ್ಕೆ ಈ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.