ಬಳ್ಳಾರಿ: ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್ ಹೇಳಿಕೆ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ
ವಿಧಾನ ಪರಿಷತ್‌ನ ಬಿಜೆಪಿ ಸದಸ್ಯರಾದ ಚಲುವಾದಿ ನಾರಾಯಣ ಸ್ವಾಮಿ ಮತ್ತು ಎನ್.ರವಿಕುಮಾರ್‌ರವರು ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಬಳಸಿರುವ ಕೀಳುಮಟ್ಟದ ಭಾಷೆಯನ್ನು ಖಂಡಿಸಿ ಮತ್ತು ಇವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.