ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ಕನ್ನಿಂಗ್ ಹಾಮ್ ರಸ್ತೆ ಬಳಿಯ ಸ್ಪರ್ಶ ಆಸ್ಪತ್ರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅಳಿಯ ಹಾಗೂ ಆಸ್ಪತ್ರೆ ಮುಖ್ಯಸ್ಥ ಡಾ.ಶರಣ್ ಶಿವರಾಜ್ ಪಾಟೀಲ್ ಅವರು, ಅಕ್ಟೋಬರ್ 23 ಕ್ಕೆ ಆಸ್ಪತ್ರೆಗೆ ದಾಖಲಾಗಿದ್ರು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು 6:20 ಕ್ಕೆ ಅವರು ನಿಧನರಾಗಿದ್ದಾರೆ. ಆಸ್ಪತ್ರೆ ಕಡೆಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅವರ ಮಕ್ಕಳು ಬಂದ ನಂತರ ಮುಂದಿನ ನಿರ್ಧಾರ ಮಾಡಲಾಗುತ್ತೆ ಎಂದರು.