ಗುಂಡ್ಲುಪೇಟೆ: ಪಕ್ಷಾಂತರಿಗಳನ್ನು ಚುನಾವಣೆಯಿಂದ ಹೊರಗುಳಿಸಿದ್ದೇವೆ; ಪಟ್ಟಣದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್
ಐದು ಮಂದಿ ಪಕ್ಷಾಂತರಿಗಳನ್ನು ಅನರ್ಹಗೊಳಿಸಿ ಹೊರಡಿಸಿದ್ದ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿಯುವ ಮೂಲಕ ತಕ್ಕ ಉತ್ತರ ನೀಡಿದೆ. ಈ ಮೂಲಕ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಐದು ಮಂದಿಯನ್ನು ಹೊರಗುಳಿಯುವಂತೆ ಮಾಡಿದ್ದೇವೆ ಎಂದು ಪುರಸಭೆ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಪಿ.ಗಿರೀಶ್ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿ, ಪಟ್ಟಣ ಪುರಸಭೆಯಲ್ಲಿ ಬಿಜೆಪಿ ಚಿಹ್ನೆಯಡಿ ಗೆದ್ದು, ಕಾಂಗ್ರೆಸ್ ಗೆ ಬೆಂಬಲ ಸೂಚಿಸಿ ಪಕ್ಷಾಂತರ ಮಾಡಿದ ಕಿರಣ್, ಹೀನಾ ಕೌಸರ್, ರಮೇಶ್, ವೀಣಾ ಮಂಜುನಾಥ್, ರಾಣಿ ಲಕ್ಷ್ಮೀದೇವಿ ಐದು ಮಂದಿಯ ಸದಸ್ಯತ್ವವನ್ನು ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದಿದ್ದಾರೆ. ಈ ಮೂಲಕ ಬಿಜೆಪಿ ವಿರುದ್ಧ ತೊಡೆ ತಟ್ಟಿದವರ ತೊಡೆ ಮುರಿದಿದ್ದೇವೆ ಎಂದು ಗುಡುಗಿದರು.