ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಭಾನುವಾರ ಮಧ್ಯಾಹ್ನ ಒಂದು ಗಂಟೆಗೆ ಶಾಸಕ ಯಾಸೀರಖಾನ ಪಠಾಣ 1 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅಲ್ಲದೆ ಕಳಪೆ ಕಾಮಗಾರಿ ಆಗದಂತೆ ಆಗಾಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೂ ಸೂಚನೆ ನೀಡಿದರು. ಗ್ರಾಮಸ್ಥರು ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಈ