ಚಿತ್ರದುರ್ಗ: ಸೆ.24,25 ರಂದು ಚಿತ್ರದುರ್ಗ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ; ಬೆಸ್ಕಾಂ ಪ್ರಕಟಣೆ
ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖೆಯ ಉದ್ದೇಶಿತ ಗೊಡಬನಹಾಳ್ ವಿ.ವಿ.ಕೇಂದ್ರಕ್ಕೆ ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವಿಭಾಗದಿಂದ ಗೋಪುರ ಸಂಖ್ಯೆ 1 ಮತ್ತು 84,85 ರ ಗೋಪುರ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 24 ಮತ್ತು 25ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್.ಜೆ.ವೈ ಮತ್ತು ಐಪಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.