ಮಾಲೂರು: ಮಾಲೂರು ತಾಲೂಕಿನಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ
Malur, Kolar | Oct 17, 2025 ಮಾಲೂರು ತಾಲೂಕಿನಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಮಾಲೂರು : ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ರವರ ಮೇಲೆ ನ್ಯಾಯಾಲಯದ ಕಲಾಪದ ವೇಳೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆದಿರುವುದನ್ನ ಖಂಡಿಸಿ ಇಂದು ಕೋಲಾರ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಲೂರು ತಾಲೂಕಿನಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತು ಬಂದ್ ಯಶಸ್ವಿಯಾಗಿದೆ. ತಾಲೂಕಿನಲ್ಲಿ ಬಂದಿಗೆ ಕರೆ ಕೊಟ್ಟ ಜನಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಬೆಳ್ಳಂ ಬೆಳಗ್ಗೆಯಿಂದಲೇ ನಗರದ ಮುಖ್ಯ ವೃತ್ತಗಳಲ್ಲಿ ಜಮಾಯಿಸಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮುಖ್ಯ ರಸ್ತೆಗಳಲ್ಲಿ ಜಾಥ ನಡೆಸಿದರು.