ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸೈಕಲ್ ಜಾಥಾಗೆ ನಗರದಲ್ಲಿ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಇಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ ಸುಧಾಕರ್ ಅವರು ಚಾಲನೆ ನೀಡಿದರು. ಈ ವೇಳೆ ಕಾರ್ಯಕ್ರಮದಲ್ಲಿ, ಜಿಲ್ಲಾ ಪಂಚ ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ವೈ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಇದ್ದರು.