ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕ ಎಂ.ಆರ್ ಪಾಟೀಲ ಕುಂದಗೋಳ ಪಟ್ಟಣದಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡಿದರು. ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ "ಎರಡು ಹನಿಗಳು ಪೋಲಿಯೋ ವಿರುದ್ದ ನಿರಂತರ ಗೆಲುವು" ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳಿಗೆ 2 ಪೋಲಿಯೋ ಹನಿಗಳನ್ನು ಹಾಕುವ ಮೂಲಕ ಚಾಲನೆ ನೀಡಿದರು. ಈ ವೇಳೆ ತಾಲೂಕ ಆಡಳಿತಧಿಕಾರಿ