ಸಂಡೂರು ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಡಿಸೆಂಬರ್ 3, 2025ರಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ, ಸಂಸದ ಇ. ತುಕಾರಾಮ್ ರವರು ನ.29,ಶನಿವಾರ ಮಧ್ಯಾಹ್ನ 12ಕ್ಕೆ ಕಾರ್ಯಕ್ರಮ ಸ್ಥಳವನ್ನು ವೀಕ್ಷಿಸಿ ಪರಿಶೀಲಿಸಿದರು. ಸ್ಥಳ ಪರಿಶೀಲನೆಯ ನಂತರ ಸಂಸದರು ಪೂರ್ವಭಾವಿ ಸಭೆಯನ್ನು ನಡೆಸಿದ್ದು, ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಪೂರ್ಣ ಪ್ರಮಾಣದ ಪೂರ್ವಸಿದ್ಧತೆಗಳ ಕುರಿತು ಚರ್ಚಿಸಿದರು.