ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗೆ ಒತ್ತು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಶುಕ್ರವಾರ ಸುವರ್ಣ ವಿಧಾನಸೌಧದಲ್ಲಿ ಸಂಚಾರಿ ಆರೋಗ್ಯ ಘಟಕ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ, ವಿಶೇಷವಾಗಿ ಸಂಪರ್ಕ ರಹಿತ, ಮತ್ತು ಗುಡ್ಡಗಾಡು ಪ್ರದೇಶಗಳ ಜನರಿಗೆ ಅವರ ಮನೆ ಬಾಗಿಲಲ್ಲೇ ಆರೋಗ್ಯ ಸೇವೆ ನೀಡುವ ಉದ್ದೇಶ ಈ ಯೋಜನೆಯಾಗಿದೆ ಎಂದು ತಿಳಿಸಿದರು.