ಬಳ್ಳಾರಿ: ಜಿಪಂ, ತಾಪಂ ಚುನಾವಣೆಗೆ
ಆಪ್ ಸ್ಪರ್ಧೆ: ನಗರದಲ್ಲಿ ಸೀತಾರಾಮ ಗುಂಡಪ್ಪ
ಮುಂಬರುವ ಜಿಪಂ, ತಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಮ್ ಆದ್ಮಿ ಪಕ್ಷವನ್ನು ಸಂಘಟಿಸಿ ಎಲ್ಲ ಕ್ಷೇತ್ರಗಳಲ್ಲೂ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಅವಕಾಶ ನೀಡಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ತಿಳಿಸಿದರು. ಬಳ್ಳಾರಿ ನಗರದಲ್ಲಿ ಭಾನುವಾರ ಮಧ್ಯಾಹ್ನ 1ಗಂಟೆಗೆ ಸುದ್ದಿಗೋಷ್ಟಯಲ್ಲಿ ಮಾತನಾಡಿದ ಸೀತಾರಾಮ ಗುಂಡಪ್ಪ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರಪ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದು ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನೀಡುತ್ತೇವೆ ಎಂದರು ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಸಿದ್ಧರಿರುವ ಕಾರ್ಯಕರ್ತರನ್ನು ಜಿಪಂ, ತಾಪಂಗಳಲ್ಲಿ ಆಕಾಂಕ್ಷಿಗಳನ್ನಾಗಿ ನೇಮಕ ಮಾಡು