ಮಳವಳ್ಳಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ಖಂಡಿಸಿ ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಮಂಡ್ಯ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ರಾಕೇಶ್ ಕಿಶೋರ್ ಹಾಗೂ ಘಟನೆ ಬೆಂಬಲಿಸಿರುವ ಭಾಸ್ಕರ್ ರಾವ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಡ್ಯ ನಗರದಲ್ಲಿ ವಿವಿಧ ಸಂಘಟನೆಗ ಳಿಂದ ಪ್ರತಿಭಟನೆ ನಡೆಸಲಾ ಯಿತು. ಅವಕಾಶ ವಂಚಿತ ಸಮುದಾಯ ಗಳ ವೇದಿಕೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ಗುರುವಾರ ಮಧ್ಯಾಹ್ನ 12.30 ರ ಸಮಯದಲ್ಲಿ ನಡೆದ ಪ್ರತಿಭಟನೆ ಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.