ನಿಡಗುಂದಿ: ತೆಲಂಗಾಣಕ್ಕೆ ನೀರು ಹರಿಸುವ ನಿರ್ಧಾರ: ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ಕರೆ
ತೆಲಂಗಾಣಕ್ಕೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಮುಂದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಶನಿವಾರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.